ಬಾಲ ಮತ್ತು ಕಿಶೋರ ಕಾರ್ಮಿಕ ತಡೆಗೆ ತರಬೇತಿ ಕಾರ್ಯಾಗಾರ
ಧಾರವಾಡ, 05 ಮಾರ್ಚ್ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗೂ ಬಾಲ ಕಾರ್ಮಿಕ ಮತ್ತು ಕಿಶೋರ
Workshop


ಧಾರವಾಡ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಹಾಗೂ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕಲಂ 17 ರಡಿ ನೇಮಕಗೊಂಡ ನಿರೀಕ್ಷಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಜರುಗಿತು.

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಕರಪತ್ರವನ್ನು ಬಿಡುಗಡೆಗೊಳಿಸಿ, ಜೀತ ಪದ್ಧತಿ ಮತ್ತು ಬಾಲ ಕಾರ್ಮಿಕತೆ ನಿರ್ಮೂಲನೆಗೆ ಸಂಬಂಧಿಸಿದ ಕಾನೂನು ಜಾಗೃತಿ ಮತ್ತು ಜವಾಬ್ದಾರಿಗಳ ಕುರಿತು ವಿವರಿಸಿದರು. ನಂತರ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಜಿಲ್ಲಾ ಪಂಚಾಯತ ಧಾರವಾಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್), ಗ್ರಾಮ ಪಂಚಾಯತ್‌ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande