ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅತೀ ಹೆಚ್ಚು ಬಜೆಟ್ ಮಂಡಿಸಿರುವ ತಮ್ಮದೇ ದಾಖಲೆಯನ್ನು ಮುರಿಯಲಿದ್ದು, ಅವರ ದಾಖಲೆಯ 17ನೇ ಆಯವ್ಯಯದ ಮೇಲೆ ಭಾರೀ ನಿರೀಕ್ಷೆಯಿದೆ. ಇಂದು ಆರಂಭವಾಗುವ ಬಜೆಟ್ ಅಧ
CM


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅತೀ ಹೆಚ್ಚು ಬಜೆಟ್ ಮಂಡಿಸಿರುವ ತಮ್ಮದೇ ದಾಖಲೆಯನ್ನು ಮುರಿಯಲಿದ್ದು, ಅವರ ದಾಖಲೆಯ 17ನೇ ಆಯವ್ಯಯದ ಮೇಲೆ ಭಾರೀ ನಿರೀಕ್ಷೆಯಿದೆ.

ಇಂದು ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಇದಕ್ಕೂ ಮುನ್ನ ವಿಶೇಷ ಸಚಿವ ಸಂಪುಟದಲ್ಲಿ ಬಜೆಟ್‌ಗೆ ಔಪಚಾರಿಕವಾಗಿ ಅನುಮೋದನೆ ಪಡೆಯಲಿದ್ದಾರೆ.

ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಒಟ್ಟು 7 ಬಜೆಟ್ ಮಂಡನೆ ಮಾಡಿದ್ದರೆ, ಮುಖ್ಯಮಂತ್ರಿಯಾಗಿ ಈವರೆಗೆ 9 ಬಜೆಟ್ ಮಂಡನೆ ಮಾಡಿದ್ದಾರೆ‌. 2023-24ರಲ್ಲಿ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆಯವರ ಅತಿ ಹೆಚ್ಚು ಬಜೆಟ್ ಮಂಡನೆ ದಾಖಲೆಯನ್ನು ಮುರಿದಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande