
ವಿಜಯಪುರ, 06 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಬೃಹತ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ವಿಜಯಪುರ ತಾಲೂಕಿನ ತೊರವಿ ಗ್ರಾಮದ ಬಳಿ 64 ಕೋಟಿ ಮೌಲ್ಯದ 12000 ಮ್ಯಾಟ್ರಿಕ್ಸ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತದೆ. ಹೀಗೆ ಬೆಳೆದ ಬೆಳೆಗಳು ಉತ್ತಮ ರೀತಿಯ ಸಂಸ್ಕರಣೆ ಆಗದೇ ಬಹುತೇಕ ಪ್ರಮಾಣದಲ್ಲಿ ಬೆಳೆಗಳು ಕೊಳೆತು ರೈತರು ನಷ್ಟ ಎಸುರಿಸುತ್ತಿದ್ದರು.
ಇದೀಗ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ಲಿಂಬೆ ಬೆಳೆಗಾರರು ಸಿಎಮ್ ಘೊಷಿಸಿದ ಶೀತಲಗೃಹ ನಿರ್ಮಾಣದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande