ನಿರೀಕ್ಷೆಗಳೆಲ್ಲ ಹುಸಿಯಾದವು, ಬೇಸರವಾಗುತ್ತಿದೆ
ಬಳ್ಳಾರಿ, 06 ಮಾರ್ಚ್ (ಹಿ.ಸ.) ಆ್ಯಂಕರ್: ಬಳ್ಳಾರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಮಾನ ನಿಲ್ದಾಣ, ಜೀನ್ಸ್ ಪಾರ್ಕ್, ಒಣ ಮೆಣಸಿನಕಾಯಿ ಮಾರುಕಟ್ಟೆ, ತುಂಗಭದ್ರಾ ಜಲಾಶಯಕ್ಕೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯಗಳಿಗಾಗಿ ವಿಶೇಷ ಯೋ
`ನಿರೀಕ್ಷೆಗಳೆಲ್ಲವೂ ಹುಸಿಯಾದವು, ಬೇಸರವಾಗುತ್ತಿದೆ'


ಬಳ್ಳಾರಿ, 06 ಮಾರ್ಚ್ (ಹಿ.ಸ.)

ಆ್ಯಂಕರ್: ಬಳ್ಳಾರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಮಾನ ನಿಲ್ದಾಣ, ಜೀನ್ಸ್ ಪಾರ್ಕ್, ಒಣ ಮೆಣಸಿನಕಾಯಿ ಮಾರುಕಟ್ಟೆ, ತುಂಗಭದ್ರಾ ಜಲಾಶಯಕ್ಕೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯಗಳಿಗಾಗಿ ವಿಶೇಷ ಯೋಜೆಗಳನ್ನು ಘೋಷಿಸಿ, ಅನುದಾನ ನೀಡುವ ನಿರೀಕ್ಷೆಗಳಿದ್ದವು. ವಾಣಿಜ್ಯೋದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳ ನಿರೀಕ್ಷೆಗಳೆಲ್ಲಾ ಹುಸಿಯಾಗಿವೆ. ಬೇಸರವಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಚುನಾವಣೆಗಳಲ್ಲಿ ಬಳ್ಳಾರಿ ಜಿಲ್ಲೆಯ

ಜನರಿಗೆ ನೀಡಿದ್ದ ಭರವಸೆಗಳು 2026-27ರ ಸಾಲಿನ ಬಜೆಟ್ನಲ್ಲಿ ಈಡೇರಿಸುತ್ತಾರೆ ಎನ್ನುವ ಲೆಕ್ಕಾಚಾರಗಳು ಸಾಕಷ್ಟಿದ್ದವು. ಆದರೆ, ಈ ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಬಳ್ಳಾರಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ

ಅವ್ವಾರು ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande