ಸ್ವಯಂ ಸೇವಾ ಸಂಸ್ಥೆಗಳಿಂದ ದರಪಟ್ಟಿ ಆಹ್ವಾನ
ಕೊಪ್ಪಳ, 06 ಮಾರ್ಚ್ (ಹಿ.ಸ.): ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ಪ್ರತಿಬಂದ) ಅಧಿನಿಯಮದ-1989ರಡಿ ಅಸ್ಪøಶ್ಯತಾ ನಿವಾರಣಾ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ದರಪಟ್ಟಿ
ಸ್ವಯಂ ಸೇವಾ ಸಂಸ್ಥೆಗಳಿಂದ ದರಪಟ್ಟಿ ಆಹ್ವಾನ


ಕೊಪ್ಪಳ, 06 ಮಾರ್ಚ್ (ಹಿ.ಸ.):

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ಪ್ರತಿಬಂದ) ಅಧಿನಿಯಮದ-1989ರಡಿ ಅಸ್ಪøಶ್ಯತಾ ನಿವಾರಣಾ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ದರಪಟ್ಟಿ ಆಹ್ವಾನಿಸಲಾಗಿದೆ.

ಸರ್ಕಾರದ ಆದೇಶದನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ–1989 & 2015 ಹಾಗೂ ನಿಯಮಗಳು–1995 ಮತ್ತು ಪರಿಷ್ಕøತ ನಿಯಮಗಳು–2016ರ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರೇತರ ಸಂಘ ಸಂಸ್ಥೆಗಳ ಮೂಲಕ ಜಾಗೃತಿ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರಗಳನ್ನು ಆಯೋಜಿಸಲು ಪರಿಷ್ಕøತ ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ 2025–26ನೇ ಸಾಲಿನಲ್ಲಿ ಅಸ್ಪøಶ್ಯತೆ ಆಚರಣೆ ಕುರಿತು ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿ ವಿಚಾರ ಕಮ್ಮಟ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲು ಇಲಾಖಾ ಮೇಲಾಧಿಕಾರಿಗಳ ನಿರ್ದೇಶನದಂತೆ ಈ ದರಪಟ್ಟಿ ಆಹ್ವಾನಿಸಲಾಗಿದೆ.

ಷರತ್ತುಗಳು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಇಲಾಖೆಯ ಕಾರ್ಯಕ್ರಮಗಳಾದ ಅಸ್ಪøಶ್ಯತೆ ನಿವಾರಣೆ, ದೇವದಾಸಿ ಮಕ್ಕಳ ವಿವಾಹ, ಅಂತರ್ಜಾತಿ ವಿವಾಹ ಮತ್ತು ವಿಧವಾ ಮರು ವಿವಾಹ ಕುರಿತು ಬೀದಿ ನಾಟಕಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸ್ವಯಂ ಸೇವಾ ಸಂಸ್ಥೆಗಳು ನೋಂದಣಿಯಾಗಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು (ನವೀಕರಣ ಹೊಂದಿರಬೇಕು). ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವಾ ಅನುಭವ ಹೊಂದಿರಬೇಕು. ಕಳೆದ ಮೂರು ವರ್ಷಗಳ ಆಡಿಟ್ ವರದಿಗಳನ್ನು ಸಲ್ಲಿಸುವುದು ಕಡ್ಡಾಯ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿರುವ ಅನುಭವವೂ ಇರಬೇಕು.

ಕಾರ್ಯಕ್ರಮದ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿ ಸಿಡಿ ರೂಪದಲ್ಲಿ ಮತ್ತು ಜಿ.ಪಿ.ಎಸ್ ಹಾಗೂ ಸಾಮಾನ್ಯ ಫೋಟೋಗಳನ್ನು ಎರಡು ಸೆಟ್ ಕಡ್ಡಾಯವಾಗಿ ಸಲ್ಲಿಸಬೇಕು. ಭೌತಿಕ ಮತ್ತು ಆರ್ಥಿಕ ಲಕೋಟೆಗಳನ್ನು ಪ್ರತ್ಯೇಕವಾಗಿ ಸಲ್ಲಿಸಬೇಕು. ಭೌತಿಕ ಲಕೋಟೆಯಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅರ್ಹತೆ ಹೊಂದಿರುವ ಸಂಸ್ಥೆಗಳ ಆರ್ಥಿಕ ಲಕೋಟೆಯನ್ನು ಮಾತ್ರ ತೆರೆಯಲಾಗುತ್ತದೆ.

ಆರ್ಥಿಕ ಲಕೋಟೆಯಲ್ಲಿ ಕಲಾವಿದರ ಸಂಭಾವನೆ, ಪ್ರಯಾಣ ವೆಚ್ಚ, ಊಟದ ವೆಚ್ಚ, ವಿಡಿಯೋ ಮತ್ತು ಫೋಟೋ ಚಿತ್ರೀಕರಣ ಸೇರಿದಂತೆ ಪ್ರತಿ ಕಾರ್ಯಕ್ರಮದ ಒಟ್ಟು ವೆಚ್ಚವನ್ನು ರೂ. 10,000 ಗಳ ಮಿತಿಯೊಳಗೆ ನಮೂದಿಸಬೇಕು. ಭೌತಿಕ ಲಕೋಟೆಯಲ್ಲಿ ಅರ್ಹರಾದವರಿಗೆ ಮಾತ್ರ ಆರ್ಥಿಕ ಲಕೋಟೆಯನ್ನು ತೆರೆದು ಪರಿಶೀಲನೆ ಮಾಡಲಾಗುವುದು. ಆರ್ಥಿಕ ಲಕೋಟೆಯ ದರಗಳ ಜೊತೆಗೆ ಭೌತಿಕ ಲಕೋಟೆಯಲ್ಲಿನ ಅಂಶಗಳಿಗೂ ಪ್ರಾಮುಖ್ಯತೆ ನೀಡಲಾಗುವುದು.

ಆಸಕ್ತ ಮತ್ತು ಅರ್ಹ ಸಂಘ ಸಂಸ್ಥೆಗಳು ಮಾರ್ಚ್ 9 ರಂದು ಬೆಳಿಗ್ಗೆ 11 ಗಂಟೆಯೊಳಗೆ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಈ ಕಾರ್ಯಾಲಯಕ್ಕೆ ದರಪಟ್ಟಿಯನ್ನು ಸಲ್ಲಿಸಬೇಕು. ಸಲ್ಲಿಸಲಾದ ದರಪಟ್ಟಿಗಳನ್ನು ಅದೇ ದಿನ ಸಾಯಂಕಾಲ 4 ಗಂಟೆಗೆ ತೆರೆಯಲಾಗುವುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande