ಜಂಬನಗೌಡ ಅವರಿಗೆ ಪಿಎಚ್ಡಿ ಪದವಿ ಪ್ರದಾನ
ಬಳ್ಳಾರಿ, 06 ಮಾರ್ಚ್ (ಹಿ.ಸ.): ಆ್ಯಂಕರ್ : ಬಳ್ಳಾರಿಯ ನಿವಾಸಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಜಂಬನಗೌಡ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿವಿಯ ಡಾ.ಎಂ.ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ “ವಿಜಯನಗರ ಸಾಮ್ರಾಜ್ಯ ಕ
Jambanagowda awarded PhD degree


ಬಳ್ಳಾರಿ, 06 ಮಾರ್ಚ್ (ಹಿ.ಸ.):

ಆ್ಯಂಕರ್ : ಬಳ್ಳಾರಿಯ ನಿವಾಸಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಜಂಬನಗೌಡ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.

ವಿವಿಯ ಡಾ.ಎಂ.ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ “ವಿಜಯನಗರ ಸಾಮ್ರಾಜ್ಯ ಕುರಿತ ಕನ್ನಡ ನಾಟಕಗಳ ಅಧ್ಯಯನ” ಎನ್ನುವ ವಿಷಯದ ಮೇಲೆ ಸಮಗ್ರ ಅಧ್ಯಯನ ಮಾಡಿ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಇತ್ತೀಚೆಗೆ ನಡೆದ ಕನ್ನಡ ವಿಶ್ವವಿದ್ಯಾಲಯದ 34 ನೇ ಘಟಿಕೋತ್ಸವದ ನುಡಿ ಹಬ್ಬದಲ್ಲಿ ಜಂಬನಗೌಡ ಅವರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾರ್ಗದರ್ಶಕರು, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಪೋಷಕರು, ಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande