
ಕೊಪ್ಪಳ, 06 ಮಾರ್ಚ್ (ಹಿ.ಸ.):
ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶ್ರೀ ದೇವರ ದಾಸಿಮಯ್ಯ, ಶ್ರೀ ಅಗ್ನಿಬನ್ನಿರಾಯ ಮತ್ತು ಶ್ರೀ ಭಗವಾನ್ ಮಹಾವೀರರ ಜಯಂತಿ ಆಚರಣೆ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಮಾರ್ಚ್ 9 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ವಹಿಸುವರು. ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಸಭೆಗೆ ತಪ್ಪದೇ ಹಾಜರಾಗಬೇಕು ಹಾಗೂ ಎಲ್ಲಾ ಸಮಾಜದ ಮುಖಂಡರು ಈ ಸಭೆಯಲ್ಲಿ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್