
ವಿಜಯಪುರ, 06 ಮಾರ್ಚ್ (ಹಿ.ಸ.)
ಆ್ಯಂಕರ್ : ಉತ್ತರ ಕರ್ನಾಟಕದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುಕೆಪಿ ಸ್ಟೇಜ್-3 ಯೋಜನೆಯಡಿ ಆಲಮಟ್ಟಿ ಆಣೆಕಟ್ಟನ್ನು 519.6 ಮೀಟರ್ ನಿಂದ 524 ಮೀಟರ್ ಎತ್ತರಿಸುವ ಕಾಮಗಾರಿಯಿಂದ ಮುಳುಗಡೆ ಆಗುವ ಜಮೀನುಗಳು ಹಾಗೂ ನೀರಾವರಿ ಕಾಲುವೆ ಜಾಲಕ್ಕೆ ಅಗತ್ಯವಿರುವ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈರತು ಹಾಗೂ ಸಂತ್ರಸ್ತರ ದೀರ್ಘಕಾಲದ ಬೇಡಿಕೆಗಳನ್ನು ನಮ್ನ ಸರ್ಕಾರ ಸ್ಪಂದಿಸಿ ಪರಿಷ್ಕೃತ ಒಪ್ಪಂದದ ದರಗಳಿಗೆ ಅನುಮೊದಿಸಿದೆ ಎಂದು ಸಿಎಮ್ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದರು.
ಮುಳುಗಡೆಗೊಳ್ಳುವ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ಹಾಗೂ ತರಿ ಜಮೀನಿಗೆ 40 ಲಕ್ಷ ರೂಪಾಯಿ ನಿಗದಿಪಡೆಸಿದೆ ಎಂದು ಸಿಎಮ್ ಬಜೆಟ್ ನಲ್ಲಿ ಘೋಷಿಸಿದರು.
ಒಪ್ಪಂದದ ಐತೀರ್ಪುಗಳ ಮುಖಾಂತರ ಜಮೀನುಗಳನ್ನು ಸ್ವಾಧೀನಪಡೆಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಸಕ್ತ ವರ್ಷದಿಂದ ಪ್ರಾರಂಭಿಸಲಾಗುವುದು ಎಂದು ಅವರು ಬಜೆಟ್ ನಲ್ಲಿ ಸ್ಪಷ್ಟಪಡಿಸಿದರು.
ಆದರೆ ಮುಳುಗಡೆ ರೈತರು ಸರ್ಕಾರ ಘೋಷಿಸಿರುವ ಪರಿಷ್ಕೃತ ದರದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ರೈತರು ಸ್ವಾಗತಿಸುತ್ತಾರಾ ಅಥವಾ ದರ ಹೆಚ್ಚಳಕ್ಕೆ ಆಗ್ರಹಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande