ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ಬಾಕಿ
ಬೆಂಗಳೂರು, 06 ಮಾರ್ಚ್ (ಹಿ.ಸ.): ಆ್ಯಂಕರ್: ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಿಗೆ ಅರಣ್ಯ ತೀರುವಳಿ ದೊರಕದಿರುವುದರಿಂದ ಕಾಮಗಾರಿಗಳ ಆರಂಭ ವಿಳಂಬವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಕಳೆದ ಎರಡು ವರ್ಷಗಳಿಂದ ಕೇಂದ್ರ ಪರಿ
Cm


ಬೆಂಗಳೂರು, 06 ಮಾರ್ಚ್ (ಹಿ.ಸ.):

ಆ್ಯಂಕರ್:

ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಿಗೆ ಅರಣ್ಯ ತೀರುವಳಿ ದೊರಕದಿರುವುದರಿಂದ ಕಾಮಗಾರಿಗಳ ಆರಂಭ ವಿಳಂಬವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕಳೆದ ಎರಡು ವರ್ಷಗಳಿಂದ ಕೇಂದ್ರ ಪರಿಸರ ಸಚಿವಾಲಯ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯಲ್ಲಿ ನಿರಂತರ ಪ್ರಯತ್ನ ನಡೆಸಿದರೂ, ಈವರೆಗೆ ಅರಣ್ಯ ಅನುಮತಿ ಲಭಿಸಿಲ್ಲ ಎಂದು ಅವರು ಹೇಳಿದ್ದಾರೆ.

ಯೋಜನೆಗಳಿಗೆ ಈಗಾಗಲೇ ಗುತ್ತಿಗೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ಅರಣ್ಯ ತೀರುವಳಿ ದೊರೆತ ತಕ್ಷಣ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಅನುಮತಿ ವಿಳಂಬವಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande