
ನವದೆಹಲಿ, 06 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಷ್ಟ್ರಪತಿ ದ್ರೌಪದಿ ಮುರ್ಮು
ಅವರು ಇಂದು ಮತ್ತು ನಾಳೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ವಿವಿಧ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿ ಭವನದ ಪ್ರಕಟಣೆ ಪ್ರಕಾರ, ಇಂದು ರಾಷ್ಟ್ರಪತಿಗಳು ಡಾರ್ಜಿಲಿಂಗ್ ನಲ್ಲಿ “ವಂದೇ ಮಾತರಂ” ಗಾಯನದ 150ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ಡಾರ್ಜಿಲಿಂಗ್ ಹಿಲ್ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಡಾರ್ಜಿಲಿಂಗ್‌ನ ಲೋಕ ಭವನದಲ್ಲಿ ನಡೆಯುವ “ರೂಟ್ಸ್ ಅಂಡ್ ರಿದಮ್ಸ್” ಎಂಬ ಪ್ರದರ್ಶನಕ್ಕೂ ಚಾಲನೆ ನೀಡಲಿದ್ದಾರೆ.
ಅದೇ ದಿನ ಅವರು ಖರಗ್ಪುರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಹಿಳಾ ನಾಯಕತ್ವ ಮತ್ತು ಸಬಲೀಕರಣ ಕುರಿತ ಪ್ಲಾಟಿನಂ ಜುಬಿಲಿ ಫ್ಲ್ಯಾಗ್‌ಶಿಪ್ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ.
ಭೇಟಿಯ ಎರಡನೇ ದಿನವಾದ ಮಾರ್ಚ್ 7ರಂದು ರಾಷ್ಟ್ರಪತಿಗಳು ಡಾರ್ಜಿಲಿಂಗ್‌ನಲ್ಲಿ ಖರಗ್ಪುರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಾರಾಷ್ಟ್ರೀಯ ಸಂತಾಲಿ ಕೌನ್ಸಿಲ್ ಆಯೋಜಿಸಿರುವ 9ನೇ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿಗಳ ಈ ಭೇಟಿಯಿಂದ ಪ್ರದೇಶದಲ್ಲಿ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುವುದರ ಜೊತೆಗೆ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಸಂವಾದ ಮತ್ತಷ್ಟು ಬಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa