
ಬಳ್ಳಾರಿ, 06 ಮಾರ್ಚ್ (ಹಿ.ಸ.):
ಆ್ಯಂಕರ್ : 2022ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಮಂಡಿಸಲಾಗಿತ್ತು. ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳ್ಳಿಸಿದ್ದು, ಆಯ್ಕೆಯಾದ ಪುಸ್ತಕಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ dpl.karnataka.gov.in ರಲ್ಲಿ ಪ್ರಕಟಿಸಲಾಗಿದೆ.
ಹಾಗಾಗಿ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರ ಪುಸ್ತಕಗಳಲ್ಲಿ ಶೀರ್ಷಕೆ, ಲೇಖಕರ ಹೆಸರು, ಪ್ರಕಾಶಕರ ಹೆಸರು, ಮುಖ ಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ, ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ಅಧಿಕೃತ ಮಾಹಿತಿ, ದಾಖಲಾತಿಗಳೊಂದಿಗೆ ಮಾ.16 ರ ಸಂಜೆ 5.30ರ ಒಳಗಾಗಿ ಅಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ತದನಂತರ ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್