
ವಿಜಯಪುರ, 06 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಗಿಹಾಳ ಗ್ರಾಮದಲ್ಲಿ ಅಂದಾಜು 50.00 ಲಕ್ಷ ರೂಪಾಯಿ ಮೊತ್ತದಲ್ಲಿ ನಿರ್ಮಿಸುತ್ತಿರುವ ಸಿ.ಸಿ.ರಸ್ತೆ ಕಾಮಗಾರಿಯನ್ನು ಸಿಂದಗಿ ಶಾಸಕ ಅಶೋಕ್ ಮನಗೂಳಿ ಪರಿಶೀಲನೆ ನಡೆಸಿದರು.
ಕಾಮಗಾರಿ ಪರಿವೀಕ್ಷಿಸಿ ಅತೀ ಶೀಘ್ರದಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡುವುದಾಗಿ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಮುಖಂಡರು,ಕಾರ್ಯಕರ್ತರು ಸೇರಿದಂತೆ ಸ್ಥಳಿಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande