ರಾಜ್ಯ ಬಜೆಟ್ ಅಲ್ಪಸಂಖ್ಯಾತರ ಒಲೈಕೆ: ಶಿವು ಹಿರೇಮನಿಪಾಟೀಲ ಟೀಕೆ
ಗದಗ, 06 ಮಾರ್ಚ್ (ಹಿ.ಸ.) ಆ್ಯಂಕರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಸಂಪೂರ್ಣವಾಗಿ ಅಲ್ಪಸಂಖ್ಯಾತರ ಒಲೈಕೆಗೆ ಸೀಮಿತವಾಗಿದ್ದು, ಬಹುಸಂಖ್ಯಾತ ಹಿಂದೂಗಳಿಗೆ ಅನ್ಯಾಯವಾಗುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಗದಗ ಬಿಜೆಪಿ ಯುವ ಮುಖಂಡ ಶಿವು ಹಿರೇಮನಿಪಾಟೀಲ ಟೀಕಿಸಿದ್ದಾರೆ. ಈ ಕುರಿತು
ಫೋಟೋ


ಗದಗ, 06 ಮಾರ್ಚ್ (ಹಿ.ಸ.)

ಆ್ಯಂಕರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಸಂಪೂರ್ಣವಾಗಿ ಅಲ್ಪಸಂಖ್ಯಾತರ ಒಲೈಕೆಗೆ ಸೀಮಿತವಾಗಿದ್ದು, ಬಹುಸಂಖ್ಯಾತ ಹಿಂದೂಗಳಿಗೆ ಅನ್ಯಾಯವಾಗುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಗದಗ ಬಿಜೆಪಿ ಯುವ ಮುಖಂಡ ಶಿವು ಹಿರೇಮನಿಪಾಟೀಲ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗ ಜನತೆಗೆ ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರು. ಆ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸರ್ಕಾರ ಈಗ ಸಾಲದ ಮೇಲೆ ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಅಗತ್ಯಗಳನ್ನುಗಮನದಲ್ಲಿಟ್ಟುಕೊಳ್ಳುವುದಕ್ಕಿಂತಲೂಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಾಗಿದೆ. ಇದರಿಂದ ಬಹುಸಂಖ್ಯಾತ ಹಿಂದೂ ಸಮುದಾಯದವರಿಗೆ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದರು.

ರಾಜ್ಯದ ಆರ್ಥಿಕ ಸ್ಥಿತಿ ದುರ್ಬಲವಾಗುತ್ತಿರುವ ನಡುವೆಯೂ ಸರ್ಕಾರ ಜನಪರ ಹಾಗೂ ಸಮತೋಲನದ ಬಜೆಟ್ ಮಂಡಿಸುವಲ್ಲಿ ವಿಫಲವಾಗಿದೆ ಎಂದು ಶಿವು ಹಿರೇಮನಿಪಾಟೀಲ ಅಭಿಪ್ರಾಯಪಟ್ಟರು. ಸರ್ಕಾರ ಎಲ್ಲ ವರ್ಗಗಳಿಗೂ ಸಮಾನವಾಗಿ ನ್ಯಾಯ ಒದಗಿಸುವ ರೀತಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande