
ಬಳ್ಳಾರಿ, 06 ಮಾರ್ಚ್ (ಹಿ.ಸ.)
ಆ್ಯಂಕರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪ್ರಸ್ತುತ ಸ್ಥಿತಿಗತಿಗಳನ್ನು ಅರ್ಥಮಾಡಿಕೊಂಡು ಭವಿಷ್ಯದ ದೃಷ್ಠಿಯಿಂದಾಗಿ `ಬಿಯಾಂಡ್ ಬೆಂಗಳೂರು' ಚಿಂತನೆ ಮಾಡಿರುವುದು ಸ್ವಾಗತಾರ್ಹ.
`ಬಿಯಾಂಡ್ ಬೆಂಗಳೂರು' ಅಡಿಯಲ್ಲಿ ಟೈರ್ 2 ಮತ್ತು ಟೈರ್ 3 ಹಂತದ ನಗರ - ಪಟ್ಟಣಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಆದ್ಯತೆ ನೀಡಿರುವುದು ಆಶಾದಾಯಕವಾಗಿದೆ.
ಬಳ್ಳಾರಿ ಜಿಲ್ಲೆಗೆ ಯಾವುದೇ ವಿಶೇಷಗಳು ಇಲ್ಲದಿರುವುದು ಬೇಸರ ಮೂಡಿಸಿದೆ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಸಿ.ಸುರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್