
ಬೆಂಗಳೂರು, 06 ಮಾರ್ಚ್ (ಹಿ.ಸ.):
ಆ್ಯಂಕರ್:
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಅದೇ ರೀತಿ ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa