ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ
ಹಾಸನ, 07 ಮಾರ್ಚ್ (ಹಿ.ಸ.): ಆ್ಯಂಕರ್: ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉದ್ಯಮಶಿಲತೆ ಕಾರ್ಯಕ್ರಮ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿಯನ್ನು ನೀಡ
ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ


ಹಾಸನ, 07 ಮಾರ್ಚ್ (ಹಿ.ಸ.):

ಆ್ಯಂಕರ್:

ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉದ್ಯಮಶಿಲತೆ ಕಾರ್ಯಕ್ರಮ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ನಡೆದ ಅರ್ಹ ಅಭ್ಯರ್ಥಿಗಳಿಗೆ ಪ್ರವಾಸಿ ತಾಣಗಳಲ್ಲಿ ಮೊಬೈಲ್ ಕ್ಯಾಂಟೀನ್ ನಡೆಸಲು ರೂ.5. ಲಕ್ಷಗಳ ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ ತರಬೇತಿ ಹಾಗೂ ಸಹಾಯಧನಕ್ಕಾಗಿ ಹಾಸನ ಜಿಲ್ಲೆಯ ಪರಿಶಿಷ್ಟ ಜಾತಿಗೆ-07 ಮತ್ತು ಪರಿಶಿಷ್ಟ ಪಂಗಡ-05 ಸೇರಿದಂತೆ ಒಟ್ಟು 12 ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು ಉದ್ಯಮಶಿಲತೆ ಕಾರ್ಯಕ್ರಮ, ಎಸ್.ಎಸ್.ಎಲ್.ಸಿ ಉತ್ತಿರ್ಣ, ವಯಸ್ಸು 20 ರಿಂದ 55 ವರ್ಷ ದೊಳಗೆ, ಪರಿಶಿಷ್ಟ ಜಾತಿ 07, ಪರಿಶಿಷ್ಟ ಪಂಗಡ-05, ಅಭ್ಯರ್ಥಿಗಳಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಮಾ.21 ರ ಸಂಜೆ 4.30ರ ಒಳಗಾಗಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಹಾಸನ ಇವರಿಗೆ ದ್ವಿ-ಪ್ರತಿಯಲ್ಲಿ ಭರ್ತಿಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172268862 ಸಂಪರ್ಕಿಸಲು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande