
ಕೊಪ್ಪಳ, 07 ಮಾರ್ಚ್ (ಹಿ.ಸ.):
ಆ್ಯಂಕರ್ : ಬೇಸಿಗೆ ಕಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ತ್ವರಿತ ನೆರವು ನೀಡುವ ಉದ್ದೇಶದಿಂದ ಕೊಪ್ಪಳ ತಾಲೂಕು ಆಡಳಿತದಿಂದ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ.
ಕೊಪ್ಪಳ ತಾಲೂಕಿನ ವಿವಿಧ ಗ್ರಾಮಗಳು ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲ್ಪಡುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಯನ್ನು ಪರಿಹರಿಸುವಂತೆ ಈ ಸಹಾಯವಾಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಕುಡಿಯುವ ನೀರು ಸಂಬಂಧಿಸಿದ ಯಾವುದೇ ತೊಂದರೆ ಕಂಡುಬಂದಲ್ಲಿ ತಾಲ್ಲೂಕಿನ ಸಾರ್ವಜನಿಕರು ಕೊಪ್ಪಳ ತಹಶೀಲ್ದಾರ ಕಚೇರಿ ಸಹಾಯವಾಣಿ ಸಂಖ್ಯೆ: 7483942249, ಕೊಪ್ಪಳ ತಾಲೂಕು ಪಂಚಾಯತ್ ಕಚೇರಿ ಸಹಾಯವಾಣಿ ಸಂಖ್ಯೆ: 9620410509 & 9902315311 ಗೆ ಸಂಪರ್ಕಿಸಿ ತಮ್ಮ ಸಮಸ್ಯೆಯನ್ನು ತಿಳಿಸಿ ಪರಿಹಾರ ಪಡೆಯಬಹುದಾಗಿದೆ.
ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೊಪ್ಪಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್