ಜಿಲ್ಲಾ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಆರಂಭಿಸಬೇಕು: ಬೊಮ್ಮಾಯಿ
ಹಾವೇರಿ, 07 ಮಾರ್ಚ್ (ಹಿ.ಸ.): ಆ್ಯಂಕರ್: ಆಯುಷ್ಮಾನ್ ಯೋಜನೆ ಅಡಿ ಬಡವರಿಗೆ 5 ಲಕ್ಷದ ವರೆಗೆ ಎಲ್ಲ ರೀತಿಯ ಆರೋಗ್ಯ ಸೇವೆ ಉಚಿತವಾಗಿ ದೊರೆಯುತ್ತವೆ. ಅದರ ಜೊತೆಗೆ ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಬಡವರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ
ಜಿಲ್ಲಾ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಆರಂಭಿಸಬೇಕು: ಬೊಮ್ಮಾಯಿ


ಹಾವೇರಿ, 07 ಮಾರ್ಚ್ (ಹಿ.ಸ.):

ಆ್ಯಂಕರ್:

ಆಯುಷ್ಮಾನ್ ಯೋಜನೆ ಅಡಿ ಬಡವರಿಗೆ 5 ಲಕ್ಷದ ವರೆಗೆ ಎಲ್ಲ ರೀತಿಯ ಆರೋಗ್ಯ ಸೇವೆ ಉಚಿತವಾಗಿ ದೊರೆಯುತ್ತವೆ. ಅದರ ಜೊತೆಗೆ ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಬಡವರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಜನೌಷಧಿ ಕೇಂದ್ರವನ್ನು ಪ್ರಾರಂಭ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಇಂದು ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಿ, ಮಾತನಾಡಿದರು.

ಆಯುಷ್ಮಾನ ಯೋಜನೆ 2017 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆರಂಭವಾಗಿದೆ. 5 ಲಕ್ಷ ರೂ. ವರೆಗೂ ಯಾವುದೇ ರೀತಿಯ ಚಿಕಿತ್ಸೆಗೆ ಕೇಂದ್ರ ಸರ್ಕಾರ ಹಣ ನೀಡುತ್ತದೆ. ಬಡವರಿಗೆ ಆರೋಗ್ಯ ಸೇವೆ ನಿಲುಕುತ್ತಿಲ್ಲ ಎನ್ನುವ ಕಾರಣಕ್ಕೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆ ಮಾಡಿದ್ದಾರೆ. ಇದರ ಜೊತೆಗೆ ಜನೌಷಧಿ ಕೇಂದ್ರವನ್ನು ಪ್ರಾರಂಭ ಮಾಡಿದ್ದಾರೆ. ಬೇರೆ ಔಷಧ ಮಳಿಗೆಗಳಲ್ಲಿ ಔಷಧದ ಬೆಲೆ ನೂರು ರೂ. ಇದ್ದರೆ ಜನೌಷಧಿ ಕೇಂದ್ರಗಳಲ್ಲಿ 20 ರೂ.ಗೆ ಸಿಗುತ್ತದೆ. ರಾಜ್ಯ ಸರ್ಕಾರ ಹಾವೇರಿ ಜಿಲ್ಲಾಸತ್ರೆಯಲ್ಲಿದ್ದ ಜನೌಷಧಿ ಕೇಂದ್ರ ಬಂದ್ ಮಾಡಿಸಿದ್ದಾರೆ ಇದರಿಂದ ಬಡವರಿಗೆ ತೊಂದರೆಯಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹಾವೇರಿ ಜಿಲ್ಲಾ ಆಸ್ಪತೆಯಲ್ಲಿ ಜನೌಷಧಿ ಕೇಂದ್ರ ಸ್ಥಾಪನೆ ಮಾಡಬೇಕು ಎಂದು ಹೇಳಿದರು.

1960 ರ ದಶಕದಲ್ಲಿ ಪ್ರವಾಹ ಬಂದಿತ್ತು. ಹಿರೆಮುಗದೂರು, ಕರ್ಜಗಿ, ಕುಣಿಮೆಳಳ್ಳಿಯಲ್ಲಿ ಸೇರಿ ಅನೇಕ ಗ್ರಾಮಗಳಲ್ಲಿ ಪ್ರವಾಹ ಬಂದು ಜನರು ಮರಗಳ ಮೇಲೆ ಹತ್ತಿ ಕುಳಿತಿದ್ದರು. ಆ ಸಂದರ್ಭದಲ್ಲಿ ಹಿರೆಮುಗದೂರು ಗ್ರಾಮ ಸ್ಥಳಾಂತರ ಆಗಿದೆ. ಉತ್ತಮ ರೀತಿಯಲ್ಲಿ ಗ್ರಾಮ ನಿರ್ಮಾಣ ಆಗಿದೆ. 2019 ರಲ್ಲಿ ಪ್ರವಾಹ ಬಂದಾಗ ನಾನು ಬಂದಿದ್ದೆ. ಗ್ರಾಮಗಳ ಅಭಿವೃದ್ದಿಗೆ ಐದು ಹಂತದ ಸಂಸ್ಥೆಗಳು ಗ್ರಾಮ ಪಂಚಾಯತಿ, ತಾಲೂಕು, ಜಿಲ್ಲಾ, ಶಾಸಕರು ಹಾಗೂ ಸಂಸದರು ಐದು ಹಂತದ ಸಂಸ್ಥೆಗಳು ಒಟ್ಟಿಗೆ ಕೆಲಸ ಮಾಡಬೇಕು. 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ ಕೆಲಸ ಮಾಡಿ ಒಂದು ತಿಂಗಳು ರಾಜಕಾರಣ ಮಾಡೋಣ ಎಂದರು.

ವಿಧಾನ ಸಭಾ ಉಪಾಧ್ಯಕ್ಷ ರುದಪ್ಪ ಲಮಾಣಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿದ್ದ ಗವಿಸಿದ್ದಪ್ಪ ಅವರು ಇಬ್ಬರೂ ಸೇರಿಯೇ ಒಂದೇ ವೇದಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅಪರೂಪ, ಇದು ಒಳ್ಳೆಯ ವೇದಿಕೆ ಅಭಿವೃದ್ಧಿಯ ವೇದಿಕೆ. ಜನರ ಕಲ್ಯಾಣ ಮಾಡುವ ವೇದಿಕೆ ಎಂದರು. ಆಯುಷ್ಕಾನ್ ಆರೋಗ್ಯ ಕೇಂದ್ರದಲ್ಲಿ ಒಪಿಡಿ, ಲ್ಯಾಬ್ ಇದೆ. ಇಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಆರೋಗ್ಯ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಎಲ್ಲರೂ ಇದರ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande