ಕೊಪ್ಪಳ : ಎಸ್.ಎಸ್.ಎಲ್.ಸಿ ಪರೀಕ್ಷೆ: ಮಾ.9 ರಂದು ಸಭೆ
ಕೊಪ್ಪಳ, 07 ಮಾರ್ಚ್ (ಹಿ.ಸ.) ಆ್ಯಂಕರ್: ಮಾರ್ಚ ಮತ್ತು ಏಪ್ರಿಲ್ -2026 ರಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಕುರಿತು ಚರ್ಚಿಸಲು ಮಾರ್ಚ್ 9 ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಗೆ ಜಿಲ್ಲೆಯ
ಕೊಪ್ಪಳ : ಎಸ್.ಎಸ್.ಎಲ್.ಸಿ ಪರೀಕ್ಷೆ: ಮಾ.9 ರಂದು ಸಭೆ


ಕೊಪ್ಪಳ, 07 ಮಾರ್ಚ್ (ಹಿ.ಸ.)

ಆ್ಯಂಕರ್: ಮಾರ್ಚ ಮತ್ತು ಏಪ್ರಿಲ್ -2026 ರಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಕುರಿತು ಚರ್ಚಿಸಲು ಮಾರ್ಚ್ 9 ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಸಭೆಗೆ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ 74 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಸಂಬ0ಧಿಸಿದ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande