ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಲೋಕ್ ಅದಾಲತ್ ಸುವರ್ಣವಕಾಶ: ನ್ಯಾ. ಮಹಾಂತೇಶ ಎಸ್.ದರಗದ
ಕೊಪ್ಪಳ, 07 ಮಾರ್ಚ್ (ಹಿ.ಸ.) ಆ್ಯಂಕರ್: ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಹಾಗೂ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ರಾಷ್ಟ್ರೀಯ ಲೋಕ್ ಅದಾಲತ್ ಒಂದು ಸುವರ್ಣಾವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧ
ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಲೋಕ್ ಅದಾಲತ್ ಸುವರ್ಣವಕಾಶ: ನ್ಯಾ. ಮಹಾಂತೇಶ ಎಸ್.ದರಗದ


ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಲೋಕ್ ಅದಾಲತ್ ಸುವರ್ಣವಕಾಶ: ನ್ಯಾ. ಮಹಾಂತೇಶ ಎಸ್.ದರಗದ


ಕೊಪ್ಪಳ, 07 ಮಾರ್ಚ್ (ಹಿ.ಸ.)

ಆ್ಯಂಕರ್: ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಹಾಗೂ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ರಾಷ್ಟ್ರೀಯ ಲೋಕ್ ಅದಾಲತ್ ಒಂದು ಸುವರ್ಣಾವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು.

ಅವರು ಶನಿವಾರದಂದು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಮಾರ್ಚ್ 14 ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಲು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜಿ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ-ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಾಜಿ ಸಂಧಾನದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಪ್ರಕರಣವು ಇಬ್ಬರಿಗೂ ಒಪ್ಪಿಗೆಯಾಗುವಂತೆ ಕೊನೆಗೊಂಡು ನ್ಯಾಯಾಲಯಕ್ಕೆ ತುಂಬಿದ ನ್ಯಾಯಾಲಯ ಶುಲ್ಕ ಸಂಪೂರ್ಣವಾಗಿ ವಾಪಸ್ ನೀಡಲಾಗುವುದು. ಕಾರಣ ಪಕ್ಷಗಾರರು ಇದೇ ಮಾರ್ಚ್ 14 ರಂದು ಕೊಪ್ಪಳ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜರುಗುವ ‘ ರಾಷ್ಟ್ರೀಯ ಲೋಕ ಅದಾಲತ್’ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದರು.

ಈ ಹಿಂದೆ ನಡೆದ ಲೋಕ್ ಅದಾಲತ್ನಲ್ಲಿ 6,746 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಈ ಬಾರಿ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದೆ. ಅಂಕಿ ಸಂಖ್ಯೆಗಿAತ ಮೌಲ್ಯಯುತ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಗಮನ ಹರಿಸಲಾಗುವುದು. ಇತ್ತೀಚಿಗೆ ಸಾರ್ವಜನಿಕರಲ್ಲಿಯೂ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ಆಸಕ್ತಿ ಹೆಚ್ಚಾಗಿದ್ದು, ಸಕಾರಾತ್ಮಕ ಬೆಳವಣಿಗೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 35,145 ಪ್ರಕರಣಗಳು ಬಾಕಿ ಇದ್ದು, ಇದರಲ್ಲಿ 16,199 ಸಿವಿಲ್ ಪ್ರಕರಣಗಳು ಹಾಗೂ 18,946 ಕ್ರಿಮಿನಲ್ ಪ್ರಕರಣಗಳಿವೆ. ಗಂಗಾವತಿ ಭಾಗದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತವೆ. ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಭಾಗವಹಿಸುವ ಮೂಲಕ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಈ ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ ಜಿ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಇತರೆ ಅಧಿಕಾರಿ, ಸಿಬ್ಬಂದಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande