
ನವದೆಹಲಿ, 07 ಮಾರ್ಚ್ (ಹಿ.ಸ.):
ಆ್ಯಂಕರ್:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ಮಾರ್ಚ್ 8ರಂದು ನವದೆಹಲಿಯ ಮಾಣೆಕ್ಷಾ ಕೇಂದ್ರದಲ್ಲಿ ರಾಷ್ಟ್ರೀಯ ಮಟ್ಟದ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮುಖ್ಯ ಭಾಷಣ ಮಾಡಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಹಾಗೂ ರಾಜ್ಯ ಸಚಿವೆ ಸಾವಿತ್ರಿಭಾಯಿ ಟಾಕೂರ್ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಮತ್ತು ಮಹಿಳೆಯರ ಉದ್ಯೋಗ ಭಾಗವಹಿಸುವಿಕೆ ಕುರಿತು ಆಡಿಯೋ-ವಿಜುವಲ್ ಪ್ರದರ್ಶನಗಳು ಹಾಗೂ ಎರಡು ಪ್ಯಾನಲ್ ಚರ್ಚೆಗಳು ನಡೆಯಲಿವೆ.
ಸುಮಾರು 150ಕ್ಕೂ ಹೆಚ್ಚು ಸಚಿವಾಲಯಗಳು ಮತ್ತು ಸಂಸ್ಥೆಗಳಿಂದ ಸುಮಾರು 1,000 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa