
ಧಾರವಾಡ, 07 ಮಾರ್ಚ್ (ಹಿ.ಸ.):
ಆ್ಯಂಕರ್:ಧಾರವಾಡ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಾರ್ಚ್ 7ರಂದು ಜಿಲ್ಲಾ ಪಂಚಾಯತ್ ಯೋಜನಾ ಶಾಖೆಯ 2025–26ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ಹಾಗೂ ಅನಿರ್ಬಂಧಿತ ಅನುದಾನದಡಿ ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗಳ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಯಿತು.
ಸಭೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆ ವಹಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಎಂಪಿಕ್ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆ, ಪಿಆರ್‌ಡಿ, ಕೆಐಆರ್‌ಡಿಎಲ್, ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa