ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆ : ರಾಜ್ಯದ ಪದಾಧಿಕಾರಿ ನೇಮಕ
ಬಳ್ಳಾರಿ, 07 ಮಾರ್ಚ್ (ಹಿ.ಸ.) ಆ್ಯಂಕರ್: ದೇಶದಲ್ಲಿ 1500ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಟನೆಗಳಿದ್ದು ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ ಎಂದು ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಎಸ್. ಬಾಬು ಅವರು ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ
ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆ : ರಾಜ್ಯದ ಪದಾಧಿಕಾರಿ ನೇಮಕ


ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆ : ರಾಜ್ಯದ ಪದಾಧಿಕಾರಿ ನೇಮಕ


ಬಳ್ಳಾರಿ, 07 ಮಾರ್ಚ್ (ಹಿ.ಸ.)

ಆ್ಯಂಕರ್: ದೇಶದಲ್ಲಿ 1500ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಟನೆಗಳಿದ್ದು ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ ಎಂದು ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಎಸ್. ಬಾಬು ಅವರು ತಿಳಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವೇದಿಕೆಯು ಭಾರತ ಸರ್ಕಾರದ ಗ್ರಾಹಕರ ಸಚಿವಾಲಯದಲ್ಲಿ

ನೋಂದಣಿ ಆಗಿದ್ದು, 80 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಈ ಸಂಸ್ಥೆಯು ಪೆÇಲೀಸ್ ಠಾಣೆಗಳಲ್ಲಿ ಅಥವಾ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಪಂಚಾಯಿತಿ ಮಾಡುವ ಸಂಘಟನೆಯಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆಯ ಹೆಸರನ್ನು ದುರ್ಬಳಕೆ ಮಾಡುವವರ ಸದಸ್ಯರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂಥಹಾ ಸದಸ್ಯರ ವಿರುದ್ಧ ಸಾರ್ವಜನಿಕರು ಗೂಗಲ್ ಮೂಲಕ ದೂರು ಸಲ್ಲಿಸಿದಲ್ಲಿ ಅಂಥಹವರನ್ನು ತಕ್ಷಣವೇ ಸಂಘಟನೆಯಿಂದ ವಜಾ ಮಾಡಲಾಗುತ್ತದೆ ಎಂದರು.

ರಾಜ್ಯ ಯುವಘಟಕದ ಅಧ್ಯಕ್ಷರಾಗಿ ಎನ್. ವಲಿಪೀರ್, ರಾಜ್ಯ ಉಪಾಧ್ಯಕ್ಷರಾಗಿ ಸುಂಕಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ನಾಗಪ್ಪ, ಜಿಲ್ಲಾ ಅಧ್ಯಕ್ಷರಾಗಿ ದೂದ್ ಭಾಷಾ, ಜಿಲ್ಲಾ ಉಪಾಧ್ಯಕ್ಷರಾಗಿ ಜಮಾಲುದ್ದೀನ್ ಹಾಗೂ ಹುಸೇನಪ್ಪ ಅವರನ್ನು ನೇಮಕ ಮಾಡಿ, ನೇಮಕಾತಿ ಆದೇಶವನ್ನು ವಿತರಣೆ ಮಾಡಲಾಯಿತು.

ದೆಹಲಿ ಪ್ರತಿನಿಧಿ ನವೀನ್, ನವಾಜ್, ಮೆಹಬೂಬ್, ಅಮೀನಾ, ಸುಜಾತ, ಪದ್ಮಾವತಿ, ಹುಲಿಗೆಮ್ಮ ಸೇರಿ ಹಲವರು ಈ ಸಂದರ್ಭದಲ್ಲಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande