ಪ. ಜಾತಿ–ಪಂಗಡಗಳ ಮೇಲೆ ದೌರ್ಜನ್ಯ ತಡೆಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಚಲುವರಾಯಸ್ವಾಮಿ
ಮೈಸೂರು, 07 ಮಾರ್ಚ್ (ಹಿ.ಸ.): ಆ್ಯಂಕರ್:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವಿಕೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಚಾರಗೋಷ್ಠಿ ಮತ್ತು ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರ
Chalavrayswami


ಮೈಸೂರು, 07 ಮಾರ್ಚ್ (ಹಿ.ಸ.):

ಆ್ಯಂಕರ್:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವಿಕೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಚಾರಗೋಷ್ಠಿ ಮತ್ತು ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಸತ್ಯಕೀರ್ತಿ ಮಹಾಸ್ವಾಮೀಜಿ, ಚಿತ್ರದುರ್ಗದ ಶ್ರೀ ಶಿವಶರಣ ಮಾದರಚನ್ನಯ್ಯ ಸ್ವಾಮೀಜಿ, ಹಾಗೂ ಕೋಡ್ನ ಶ್ರೀ ಉರಿಲಿಂಗ ಪೆದ್ದಿಶ್ವರ ಮಹಾಸಂಸ್ಥಾನ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಮಾನವಕುಲ ಒಂದೇ. ಜಾತಿ ಪದ್ಧತಿ ಹಳೆಯ ಕಾಲದಿಂದಲೂ ಸಮಾಜದಲ್ಲಿ ಇದ್ದರೂ, ಇಂದಿಗೂ ಅಸ್ಪೃಶ್ಯತೆ ಮತ್ತು ದೌರ್ಜನ್ಯಗಳ ಬಗ್ಗೆ ಮಾತನಾಡಬೇಕಾಗಿರುವುದು ಬೇಸರದ ಸಂಗತಿ” ಎಂದು ಹೇಳಿದರು.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಜಾರಿಯಲ್ಲಿದ್ದು, ಈ ಸಮುದಾಯಗಳ ಅಭ್ಯುದಯಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಜೊತೆಗೆ ಕಾನೂನಿನ ದುರ್ಬಳಕೆ ಆಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಕ್ಷಣವೇ ಪರಿಶೀಲಿಸಿ, ಶೀಘ್ರವಾಗಿ ವಿಲೇವಾರಿ ಮಾಡುವತ್ತ ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಪಿ. ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಆನಂದ್, ಮೈಶುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮೂಡ ಅಧ್ಯಕ್ಷ ಬಿ.ಪಿ. ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್ ಸೇರಿದಂತೆ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande