
ಬಳ್ಳಾರಿ, 07 ಮಾರ್ಚ್ (ಹಿ.ಸ.)
ಆ್ಯಂಕರ್: ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಟಿ-20 ಕ್ರಿಕೆಟ್ ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಭಾರತೀಯ ತಂಡಕ್ಕೆ ಶ್ರೀವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿಗಳು ಸ್ವರಚಿತ ದೇಶಭಕ್ತಿ ಗೀತೆಗಳನ್ನು ಹಾಡಿ, ನೃತ್ಯ ಪ್ರದರ್ಶನ ಮಾಡಿದರು. ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮ, ಅಭಿಷೇಕ್ ಶರ್ಮ, ಸಂಜುಸ್ಯಾಮ್ಸನ್, ಅಕ್ಸರ್ ಪಟೀಲ್, ಜಸ್ಪ್ರೀತ್ ಬುಮ್ರಾ ಹಾಗೂ ತಂಡಕ್ಕೆ ಶುಭ ಹಾರೈಸಿ, ಜೈ ಹೋಂ ಇಂಡಿಯಾ ಘೋಷಣೆಗಳನ್ನು ಹಾಕಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್