ಮಹಿಳೆಯರ ಬೈಕ್ ರ್ರ್ಯಾಲಿಗೆ ಓಂ ಬಿರ್ಲಾ ಚಾಲನೆ
ನವದೆಹಲಿ, 08 ಮಾರ್ಚ್ (ಹಿ.ಸ.): ಆ್ಯಂಕರ್: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನವದೆಹಲಿಯ ಕನ್ನಾಟ್ ಪ್ಲೇಸ್ ನಲ್ಲಿ ಆಯೋಜಿಸಲಾದ ಸಂಪೂರ್ಣ ಮಹಿಳೆಯರ ಬೈಕ್ ರ್ರ್ಯಾಲಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾನುವಾರ ಚಾಲನೆ ನೀಡಿದರು. ಈ ಕಾರ್ಯಕ್ರಮದ ಕುರಿತು
Rally


ನವದೆಹಲಿ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನವದೆಹಲಿಯ ಕನ್ನಾಟ್ ಪ್ಲೇಸ್ ನಲ್ಲಿ ಆಯೋಜಿಸಲಾದ ಸಂಪೂರ್ಣ ಮಹಿಳೆಯರ ಬೈಕ್ ರ್ರ್ಯಾಲಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾನುವಾರ ಚಾಲನೆ ನೀಡಿದರು.

ಈ ಕಾರ್ಯಕ್ರಮದ ಕುರಿತು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪ್ರತಿಕ್ರಿಯಿಸಿದ ಓಂ ಬಿರ್ಲಾ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ ಧೈರ್ಯ, ಆತ್ಮವಿಶ್ವಾಸ ಮತ್ತು ಮಹಿಳಾ ಸಬಲೀಕರಣದ ಸಂದೇಶವನ್ನು ಹರಡಿದ್ದಾರೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ರಾಷ್ಟ್ರದ ಪುನರ್ನಿರ್ಮಾಣದವರೆಗೆ ಭಾರತೀಯ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸ್ಪೂರ್ತಿದಾಯಕ ನಾಯಕತ್ವ ನೀಡಿದ್ದು, ಇಂದು ಪಂಚಾಯತ್‌ಗಳಿಂದ ಸಂಸತ್ತಿನವರೆಗೆ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದಲ್ಲಿ ಮಹಿಳಾ ಶಕ್ತಿ ಪ್ರಮುಖ ಶಕ್ತಿಯಾಗಿದೆ ಎಂದು ಅವರು ಹೇಳಿದರು.

ಇದೇ ವೇಳೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಸಹ ಎಕ್ಸನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ನೂರಾರು ಮಹಿಳೆಯರು ಈ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಮಹಿಳಾ ಶಕ್ತಿಯೇ ಅಭಿವೃದ್ಧಿ ಹೊಂದಿದ ಭಾರತದ ನಿಜವಾದ ಪ್ರೇರಕ ಶಕ್ತಿ ಎಂಬ ಬಲವಾದ ಸಂದೇಶ ನೀಡಿದ್ದಾರೆ ಎಂದು ಹೇಳಿದರು. ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ನಾಯಕತ್ವ ವಹಿಸುತ್ತಿರುವುದು ಬದಲಾಗುತ್ತಿರುವ ಭಾರತದ ಪ್ರತಿಬಿಂಬವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಸಂಸದರಾದ ಬಾನ್ಸುರಿ ಸ್ವರಾಜ್, ಕಮಲ್ದ್ಜೀತ್ ಸೆಹ್ರಾವತ್, ಪ್ರಿಯಾಂಕಾ ಚತುರ್ವೇದಿ, ಸ್ವಾತಿ ಮಲಿವಾಲ್ ಮತ್ತು ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಕುಲ್ಜೀತ್ ಸಿಂಗ್ ಚಾಹಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande