ಮಮತಾ ಬ್ಯಾನರ್ಜಿ ನಡೆ ಪ್ರಜಾಪ್ರಭುತ್ವದ ಸಭ್ಯತೆಗೆ ವಿರುದ್ಧ: ಅನ್ನಪೂರ್ಣ ದೇವಿ
ನವದೆಹಲಿ, 08 ಮಾರ್ಚ್ (ಹಿ.ಸ.): ಆ್ಯಂಕರ್:ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಭೇಟಿಯ ವೇಳೆ ನಡೆದ ಘಟನೆ ಕುರಿತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಭಾನುವಾರ ನವದೆಹಲಿಯ
Annapurna devi


ನವದೆಹಲಿ, 08 ಮಾರ್ಚ್ (ಹಿ.ಸ.):

ಆ್ಯಂಕರ್:ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಭೇಟಿಯ ವೇಳೆ ನಡೆದ ಘಟನೆ ಕುರಿತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.

ಭಾನುವಾರ ನವದೆಹಲಿಯ ಕರ್ತವ್ಯ ಪಂಥದಲ್ಲಿ ನಡೆದ ಶಕ್ತಿ ನಡಿಗೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೀಡಲಾದ ವರ್ತನೆ ಅತ್ಯಂತ ದುರದೃಷ್ಟಕರವಾಗಿದ್ದು, ಅದು ಪ್ರಜಾಪ್ರಭುತ್ವದ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

“ರಾಷ್ಟ್ರಪತಿಗಳು ದೇಶದ ಸಾಂವಿಧಾನಿಕ ಮುಖ್ಯಸ್ಥರು. ಅವರ ಪಶ್ಚಿಮ ಬಂಗಾಳ ಭೇಟಿಯ ವೇಳೆ ಯಾವುದೇ ಸಚಿವರು ಅಥವಾ ಮುಖ್ಯಮಂತ್ರಿಗಳ ಅನುಪಸ್ಥಿತಿ ರಾಜ್ಯ ಸರ್ಕಾರದ ಕಳಪೆ ಚಿಂತನೆ ಮತ್ತು ಮನೋಭಾವವನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಹತಾಶರಾಗಿರುವಂತಿದೆ ಎಂದು ಕೂಡ ಅವರು ಟೀಕಿಸಿದರು.

ಅನ್ನಪೂರ್ಣ ದೇವಿ ಅವರು ಮುಂದುವರೆದು, ರಾಷ್ಟ್ರಪತಿಗಳು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ ಅವರು ಸಂಪೂರ್ಣ ದೇಶದ ಸಾಂವಿಧಾನಿಕ ಮುಖ್ಯಸ್ಥೆ. ಆದ್ದರಿಂದ ಅವರು ದೇಶದ ಯಾವ ಭಾಗಕ್ಕೂ ಭೇಟಿ ನೀಡಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ಹೇಳಿದರು.

ಈ ಹುದ್ದೆಯ ಗೌರವ ಮತ್ತು ಪ್ರತಿಷ್ಠೆಗೆ ಧಕ್ಕೆಯುಂಟು ಮಾಡುವ ಯಾವುದೇ ವರ್ತನೆ ಸ್ವೀಕಾರಾರ್ಹವಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಈ ಘಟನೆ ದೇಶದ ಜನರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ತಿಳಿಸಿದ ಅವರು, ಈ ಅಸಭ್ಯ ವರ್ತನೆಗೆ ಪಶ್ಚಿಮ ಬಂಗಾಳ ಸರ್ಕಾರ ದೇಶದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande