
ಗದಗ, 08 ಮಾರ್ಚ್ (ಹಿ.ಸ.)
ಆ್ಯಂಕರ್:- ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಏಪ್ರಿಲ್ 5 ರಂದು ಹಾಗೂ ಏಪ್ರಿಲ್ 14 ರಂದು ಕ್ರಮವಾಗಿ ರಾಜ್ಯಾದ್ಯಂತ ಡಾ. ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಗಳನ್ನು ಆಚರಿಸುವ ಹಿನ್ನೆಲೆಯಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೊದಲು 10-03-2026 ಎಂದು ನಿಗದಿಪಡಿಸಲಾಗಿದ್ದು, ಇದೀಗ ಅದನ್ನು 15-03-2026ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು 15-03-2026ರೊಳಗೆ ಕೇಂದ್ರ ಕಚೇರಿ ಅಥವಾ ಸಂಬಂಧಿತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP