ಚಿತ್ತಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ:ಪ್ರಿಯಾಂಕ್ ಖರ್ಗೆ
ಚಿತ್ತಾಪುರ, 08 ಮಾರ್ಚ್ (ಹಿ.ಸ.): ಆ್ಯಂಕರ್: ಚಿತ್ತಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಚಿತ್ತಾಪುರ ಮತಕ್ಷೇತ್ರವು ಅಭಿವೃದ್ಧಿ ಹಾಗೂ ಸುಧಾರಣೆಯ ಪಥದಲ್ಲಿದೆ. ಕ್ಷೇತ್ರದ ಜನರ ಅಗತ್ಯಗಳು ಮತ್ತು ಬೇಡಿಕೆಗಳಿಗೆ ಅನುಗುಣವಾಗಿ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಮುಖ್ಯವಾಗಿ ಮೂಲಭೂತ ಸೌಕರ್ಯ
P.kaharge


ಚಿತ್ತಾಪುರ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಚಿತ್ತಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ

ಚಿತ್ತಾಪುರ ಮತಕ್ಷೇತ್ರವು ಅಭಿವೃದ್ಧಿ ಹಾಗೂ ಸುಧಾರಣೆಯ ಪಥದಲ್ಲಿದೆ. ಕ್ಷೇತ್ರದ ಜನರ ಅಗತ್ಯಗಳು ಮತ್ತು ಬೇಡಿಕೆಗಳಿಗೆ ಅನುಗುಣವಾಗಿ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಮುಖ್ಯವಾಗಿ ಮೂಲಭೂತ ಸೌಕರ್ಯಗಳು, ಜೀವನೋಪಾಯ, ಶಿಕ್ಷಣ, ವಸತಿ ಮತ್ತು ಉದ್ಯೋಗಕ್ಕೆ ಪೂರಕವಾದ ಜನಪರ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕ್ಷೇತ್ರದ ಶಾಸಕ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಇಂದು ಚಿತ್ತಾಪುರ ಮತಕ್ಷೇತ್ರದಲ್ಲಿ ಒಟ್ಟು ₹1069.41 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಅಡಿಗಲ್ಲು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಇದರಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ 603 ಕಾಮಗಾರಿಗಳಿಗೆ ₹256.08 ಕೋಟಿ ಅನುದಾನ, ಲೋಕೋಪಯೋಗಿ ಇಲಾಖೆಯ 42 ಕಾಮಗಾರಿಗಳಿಗೆ ಅನುದಾನ ₹186.67 ಕೋಟಿ ಅನುದಾನ ಸೇರಿದಂತೆ ಒಟ್ಟು ₹979.83 ಕೋಟಿ ವೆಚ್ಚದ 777 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ಇದರೊಂದಿಗೆ ₹89.57 ಕೋಟಿ ಮೊತ್ತದಲ್ಲಿ ಪೂರ್ಣಗೊಂಡಿರುವ ಲೋಕೋಪಯೋಗಿ ಇಲಾಖೆಯ 6 ಕಾಮಗಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಒಟ್ಟು 23 ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ಈ ಯೋಜನೆಗಳು ತಾಲೂಕಿನ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೀಡಲಿವೆ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande