
ಬೀದರ್, 08 ಮಾರ್ಚ್ (ಹಿ.ಸ.):
ಆ್ಯಂಕರ್:
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೀದರ ರಂಗಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಬೀದರ ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು” ಎಂಬ ಮಾತಿನಂತೆ ಮಹಿಳೆಯರು ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದರು. ಉಕ್ಕಿನ ಮಹಿಳೆ ಎಂದು ಖ್ಯಾತಿ ಪಡೆದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ದಿಟ್ಟ ಆಡಳಿತ ದೇಶಕ್ಕೆ ದಿಕ್ಕು ತೋರಿದ ಮಹತ್ವದ ಉದಾಹರಣೆಯಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಪಿ.ಟಿ. ಉಷಾ, ಸೈನಾ ನೆಹ್ವಾಲ್, ಹಾಗೂ ಅಂತರಿಕ್ಷ ಕ್ಷೇತ್ರದಲ್ಲಿ ಕಲ್ಪನಾ ಚಾವ್ಲಾ, ಸುನೀತಾ ವಿಲಿಯಮ್ಸ್ ಅವರಂತಹ ಮಹಿಳೆಯರು ದೇಶದ ಹೆಮ್ಮೆಯಾಗಿದೆ ಎಂದರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ ₹2000 ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದ ಕೋಟ್ಯಂತರ ಮಹಿಳೆಯರು ಇಂದು ಉಚಿತವಾಗಿ ಬಸ್ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa