ಖಾಸಗಿ ಆಸ್ಪತ್ರೆ ಲಾಭಿಗೆ ಮಣಿಯುತ್ತಿರುವ ಸರಕಾರ:ಬಿಜೆಪಿ
ಬೆಂಗಳೂರು, 08 ಮಾರ್ಚ್ (ಹಿ.ಸ.): ಆ್ಯಂಕರ್: ಹೊಸಕೋಟೆ ತಾ‌ಲ್ಲೂಕಿನ ಕೊಳತೂರು ಬಳಿ ನಿರ್ಮಿಸಿರುವ ಸರ್ಕಾರಿ ಆಸ್ಪತ್ರೆಯು ಉದ್ಘಾಟನೆಯಾಗದ ಕಾರಣ ಸ್ಥಳೀಯ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರಿಗೆ ಅನು
Bjp


ಬೆಂಗಳೂರು, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಹೊಸಕೋಟೆ ತಾ‌ಲ್ಲೂಕಿನ ಕೊಳತೂರು ಬಳಿ ನಿರ್ಮಿಸಿರುವ ಸರ್ಕಾರಿ ಆಸ್ಪತ್ರೆಯು ಉದ್ಘಾಟನೆಯಾಗದ ಕಾರಣ ಸ್ಥಳೀಯ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರಿಗೆ ಅನುಕೂಲವಾಗಲೆಂದು 100 ಹಾಸಿಗೆಗಳ ತಾಯಿ ಮಕ್ಕಳ ಹೈಟೆಕ್ ಸರ್ಕಾರಿ ಆಸ್ಪತ್ರೆಗೆ ಶಿಲಾನ್ಯಾಸ ನೇರವೇರಿಸಲಾಗಿತ್ತು. ಆದೀಗ ನಿರ್ಮಾಣವಾಗಿ ಉದ್ಘಾಟನೆ ಕಾಣದೆ ಕಾಂಗ್ರೆಸ್ ಆಡಳಿತದಲ್ಲಿ ಅನಾಥವಾಗಿದೆ. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗ ಮಾಡಿಸುವ ಪರಿಸ್ಥಿತಿಯನ್ನು ಬಡ ಜನತೆಗೆ ಕಾಂಗ್ರೆಸ್ ಸರ್ಕಾರ ತಂದೊಡ್ಡಿದೆ.

ಕಟ್ಟಡ ಕಾರ್ಯ ಪೂರ್ಣಗೊಂಡಿದ್ದರೂ ಸಾರ್ವಜನಿಕವಾಗಿ ಸೇವೆಗೆ ಮುಕ್ತಗೊಳಿಸದೆ ಜಿಲ್ಲಾ ಉಸ್ತುವಾರಿ ಸಚಿವರು ಮೀನಾಮೇಷ ಎಣಿಸುತ್ತಿರುವುದರ ಹಿಂದೆ ಖಾಸಗಿ ಆಸ್ಪತ್ರೆಯ ಲಾಭಿಯ ಅನುಮಾನ ಕಾಡುತ್ತಿದೆ.

ರಾಜ್ಯ ಸರ್ಕಾರ ಬಡವರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡದೆ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು‌ ಎಂದು ಬಿಜೆಪಿ ಆಗ್ರಹಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande