ಜೆಡಿಎಸ್ ಮಹಿಳಾ ಘಟಕದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಬೆಂಗಳೂರು, 08 ಮಾರ್ಚ್ (ಹಿ.ಸ.): ಆ್ಯಂಕರ್: ಜೆಡಿಎಸ್ ರಾಜ್ಯ ಮಹಿಳಾ ಘಟಕದ ವತಿಯಿಂದ ಬೆಂಗಳೂರು ನಗರದ ಡಾ.ಬಾಬು ಜಗಜೀವನ ರಾಮ್ ಭವನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಿದರು. ಕಾರ್ಯಕ್ರಮವು ಮಾಜಿ ಪ್ರಧಾನಮಂತ್ರಿ
Jds w


Jds


ಬೆಂಗಳೂರು, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಜೆಡಿಎಸ್ ರಾಜ್ಯ ಮಹಿಳಾ ಘಟಕದ ವತಿಯಿಂದ ಬೆಂಗಳೂರು ನಗರದ ಡಾ.ಬಾಬು ಜಗಜೀವನ ರಾಮ್ ಭವನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಿದರು.

ಕಾರ್ಯಕ್ರಮವು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೆಗೌಡ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ. ವಿಶೇಷ ಅತಿಥಿಯಾಗಿ ಹಿರಿಯ ವಕೀಲರಾದ ಶ್ವೇತಾ ರವಿಶಂಕರ್ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಹಿಳಾ ಸಬಲೀಕರಣ, ಸಮಾಜದಲ್ಲಿ ಮಹಿಳೆಯರ ಪಾತ್ರ ಮತ್ತು ರಾಜಕೀಯದಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆ ಕುರಿತು ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಅನಿತಾ ಕುಮಾರಸ್ವಾಮಿ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾದ ಎಂ.ಕೃಷ್ಣಾರೆಡ್ಡಿ, ಪಕ್ಷದ ಜಿಬಿಎ ಅಧ್ಯಕ್ಷರಾದ ಎಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಸೇರಿದಂತೆ ಅನೇಕ ನಾಯಕರು, ನಾಯಕಿಯರು ಹಾಗೂ ಕಾರ್ಯಕರ್ತರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande