ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, 08 ಮಾರ್ಚ್ (ಹಿ.ಸ.): ಆ್ಯಂಕರ್:ಕೇಂದ್ರ ಸರ್ಕಾರದ ಅಡುಗೆ ಅನಿಲ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಬೆಂಗಳೂರು ನಗರದ ಭಾರತ್ ಜೋಡೋ ಭವನದಲ್ಲಿರ
Protest


ಬೆಂಗಳೂರು, 08 ಮಾರ್ಚ್ (ಹಿ.ಸ.):

ಆ್ಯಂಕರ್:ಕೇಂದ್ರ ಸರ್ಕಾರದ ಅಡುಗೆ ಅನಿಲ ಬೆಲೆ ಏರಿಕೆ ನಿರ್ಧಾರವನ್ನು ಖಂಡಿಸಿ ಮಹಿಳಾ ಕಾಂಗ್ರೆಸ್

ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಬೆಂಗಳೂರು ನಗರದ ಭಾರತ್ ಜೋಡೋ ಭವನದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಮುಂಭಾಗದಲ್ಲಿ ನಡೆಯಿತು.

ಪ್ರತಿಭಟನಾಕಾರರು ಅಡುಗೆ ಅನಿಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಸಾಮಾನ್ಯ ಜನತೆ, ವಿಶೇಷವಾಗಿ ಮಹಿಳೆಯರು ಮತ್ತು ಮಧ್ಯಮ ವರ್ಗದ ಕುಟುಂಬಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ತಕ್ಷಣವೇ ಅನಿಲದ ಬೆಲೆಯನ್ನು ಇಳಿಸಿ ಜನರಿಗೆ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಹಲವು ಕಾಂಗ್ರೆಸ್ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande