ಶಾಸಕ ಯತ್ನಾಳ್ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ವಾಗ್ದಾಳಿ
ವಿಜಯಪುರ, 08 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಕ್ರಮವಾಗಿ ಮತಗಳನ್ನು ಹಾಕಿಸಿಕೊಳ್ಳುವ ಮೂಲಕ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಮೀಜಾ ನದಾಫ ಆರೋಪಿಸಿದರು. ವಿಜಯಪುರ ನಗರದಲ್ಲಿ ಮಾತ
ಶಾಸಕ ಯತ್ನಾಳ್ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ವಾಗ್ದಾಳಿ


ವಿಜಯಪುರ, 08 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಕ್ರಮವಾಗಿ ಮತಗಳನ್ನು ಹಾಕಿಸಿಕೊಳ್ಳುವ ಮೂಲಕ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಮೀಜಾ ನದಾಫ ಆರೋಪಿಸಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರು ಬೋಗಸ್ ವೋಟ್ ಹಾಕಿಸುವ ಮೂಲಕ ಕಳೆದ ಚುನಾವಣೆಯಲ್ಲಿ ಗೆದ್ದಿದ್ದಾರೆ. ಆದರೆ ಪ್ರಾಮಾಣಿಕವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹಮೀದ್ ಮುಷ್ರಿಫ್ ಅವರ ಗೆದ್ದಂತೆ ಎಂದು ನದಾಫ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು.

ಅಲ್ಪಸಂಖ್ಯಾತ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಯತ್ನಾಳ್ ಅವರು ಈ ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಕೂಡ ದೇಶಕ್ಕಾಗಿ ದುಡಿದಿದ್ದಾರೆ ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿದ್ದಾರೆ. ಆದರೆ ಶಾಸಕ ಯತ್ನಾಳ್ ಅವರು ಟೋಪಿವಾಲಾ ಬುರ್ಕಾ ವಾಲಾ ಎಂದು ಅಲ್ಪಸಂಖ್ಯಾತರಿಗೆ ಪದೆ ಪದೆ ಅವಮಾನ ಮಾಡುತ್ತಾ ಬಂದಿದ್ದಾರೆಂದರು.

ಇನ್ನು ಮೇಲಾದರೂ ಅಲ್ಪಸಂಖ್ಯಾತರಿಗೆ ಅವಮಾನ ಅವಹೇಳನಕಾರಿ ಭಾಷಣ ಮಾಡುವುದನ್ನು ನಿಲ್ಲಿಸಿ. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ನದಾಫ್ ಅವರು ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande