ಬೆಂಗಳೂರು ಬಳಿ ಲಾರಿಗೆ ಕಾರು ಡಿಕ್ಕಿ:ಮೂವರ ಸಾವು
ಬೆಂಗಳೂರು, 08 ಮಾರ್ಚ್ (ಹಿ.ಸ.): ಆ್ಯಂಕರ್: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು–ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಮುಂಜಾನೆ ನಡೆದಿದೆ. ಮೃತರನ್ನು ಸೈಯದ್ ಪಾಷ (22),
Accident


ಬೆಂಗಳೂರು, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು–ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಮುಂಜಾನೆ ನಡೆದಿದೆ.

ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23) ಹಾಗೂ ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ನಾಲ್ವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಈ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಗ್ಗಲೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande