ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಭೆ
ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.): ಆ್ಯಂಕರ್: ಶಾಸಕ ಮಹೇಶ ಟೆಂಗಿನಕಾಯಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಸಭೆ ನಡೆಯಿತು. ಸಭೆಯಲ್ಲಿ ಕ್ಷೇತ್ರದ ಮತದಾರರ ಪಟ್ಟಿಯನ್ನು ನವೀಕರಿಸುವುದು, ಹೊಸ ಮತದಾರರ
Meeting


ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಶಾಸಕ ಮಹೇಶ ಟೆಂಗಿನಕಾಯಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಸಭೆ ನಡೆಯಿತು.

ಸಭೆಯಲ್ಲಿ ಕ್ಷೇತ್ರದ ಮತದಾರರ ಪಟ್ಟಿಯನ್ನು ನವೀಕರಿಸುವುದು, ಹೊಸ ಮತದಾರರನ್ನು ನೋಂದಾಯಿಸುವುದು ಹಾಗೂ ತಿದ್ದುಪಡಿ ಕಾರ್ಯಗಳನ್ನು ಸಮರ್ಪಕವಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಮತದಾರರ ಪಟ್ಟಿಯ ಶುದ್ಧೀಕರಣ ಹಾಗೂ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಸಂಘಟಿತವಾಗಿ ನಡೆಸುವಂತೆ ಕಾರ್ಯಕರ್ತರಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ , ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಶೆಟ್ಟನಗೌಡರ ಮತ್ತು ಬಿಎಲ್‌ಎ-1 ಆಗಿರುವ ಪ್ರಶಾಂತ ಜಾಧವ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande