
ಮೈಸೂರು, 08 ಮಾರ್ಚ್ (ಹಿ.ಸ.):
ಆ್ಯಂಕರ್:ಮೈಸೂರಿನ ಅರಮನೆ ಆವರಣದಲ್ಲಿ ಪೌರ ಕಾರ್ಮಿಕರ ವತಿಯಿಂದ ಆಯೋಜಿಸಲಾದ ಸ್ವಚ್ಛತೆಗಾಗಿ ನಡಿಗೆ ವಾಕಾಥಾನ್‌ಗೆ ಸಚಿವ ಮಹದೇವಪ್ಪ ಚಾಲನೆ ನೀಡಿದರು.
ನಗರದ ಸ್ವಚ್ಛತೆಗಾಗಿ ಪ್ರತಿದಿನ ಶ್ರಮಿಸುವ ಪೌರ ಕಾರ್ಮಿಕರಿಗೆ ಈ ಸಂದರ್ಭದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ನಗರವನ್ನು ಸ್ವಚ್ಛವಾಗಿಡುವಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಜಿ.ಟಿ.ದೇವೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa