ಆರಣಿ ಗ್ರಾಮದಲ್ಲಿ ಜಲಾನಯನ ಮೇಳಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಮಂಡ್ಯ, 08 ಮಾರ್ಚ್ (ಹಿ.ಸ.): ಆ್ಯಂಕರ್: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಆರಣಿ ಗ್ರಾಮದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾದ “ಜಲಾನಯನ ಮೇಳ – 2025-26” ಕಾರ್ಯಕ್ರಮದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಲ ಸ
Mela


ಮಂಡ್ಯ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಆರಣಿ ಗ್ರಾಮದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾದ “ಜಲಾನಯನ ಮೇಳ – 2025-26” ಕಾರ್ಯಕ್ರಮದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ ಹಾಗೂ ಭೂ ಸಂಪನ್ಮೂಲಗಳ ಸಮರ್ಥ ಬಳಕೆಗೆ ಜಲಾನಯನ ಯೋಜನೆಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು. ಇಂತಹ ಮೇಳಗಳ ಮೂಲಕ ರೈತರಿಗೆ ವಿವಿಧ ಜಲಾನಯನ ಯೋಜನೆಗಳ ಮಾಹಿತಿ, ನವೀನ ಕೃಷಿ ವಿಧಾನಗಳು ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ನೀರಿನ ಸದ್ಬಳಕೆ, ಮಣ್ಣಿನ ಸಾಸಿರಿತನವನ್ನು ಕಾಪಾಡಿಕೊಳ್ಳುವುದು ಹಾಗೂ ರೈತರ ಸಬಲೀಕರಣದ ಮೂಲಕ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಜಲಾನಯನ ಯೋಜನೆಗಳು ಬಲವಾದ ಬೆಂಬಲ ನೀಡುತ್ತಿವೆ ಎಂದು ಸಚಿವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜಲಾನಯನ ಯೋಜನೆಗಳ ಕುರಿತು ರೈತರಿಗೆ ಮಾಹಿತಿ ನೀಡಲಾಗಿದ್ದು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಭಾಗವಹಿಸಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande