ಅಂತಾರಾಷ್ಟ್ರೀಯ ಮಹಿಳಾ ದಿನ: ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ
ನವದೆಹಲಿ, 08 ಮಾರ್ಚ್ (ಹಿ.ಸ.): ಆ್ಯಂಕರ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದೇಶದ ಎಲ್ಲರಿಗೂ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ವಿದ್ಯಾವಂತ ಮತ್ತು ಸಬಲೀಕರಣಗೊಂಡ ಮಹಿಳೆಯ
President


ನವದೆಹಲಿ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದೇಶದ ಎಲ್ಲರಿಗೂ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು,

ವಿದ್ಯಾವಂತ ಮತ್ತು ಸಬಲೀಕರಣಗೊಂಡ ಮಹಿಳೆಯರು ಪ್ರಗತಿಪರ ರಾಷ್ಟ್ರದ ಆಧಾರಸ್ತಂಭಗಳು ಎಂದು ಹೇಳಿದ್ದಾರೆ. ನಾರಿ ಶಕ್ತಿ ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠತೆ ಸಾಧಿಸಿ ಧೈರ್ಯದಿಂದ ಮುನ್ನಡೆಯುತ್ತಿರುವುದು ಹೆಚ್ಚು ಅಂತರ್ಗತ ಹಾಗೂ ಸಮೃದ್ಧ ಸಮಾಜದ ನಿರ್ಮಾಣಕ್ಕೆ ಬಲ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಯೂ ಘನತೆ, ಸುರಕ್ಷತೆ ಮತ್ತು ಸ್ವಾತಂತ್ರ್ಯದೊಂದಿಗೆ ಬೆಳೆಯಲು ಸಮಾನ ಅವಕಾಶಗಳನ್ನು ಹೊಂದಿರುವ ಸಮಾಜ ನಿರ್ಮಿಸಲು ನಮ್ಮ ಸಾಮೂಹಿಕ ಬದ್ಧತೆಯನ್ನು ಪುನರುಚ್ಚರಿಸೋಣ ಎಂದು ಅವರು ಕರೆ ನೀಡಿದ್ದಾರೆ. ಮಹಿಳೆಯರ ಆಕಾಂಕ್ಷೆಗಳು ಮತ್ತು ಸಾಧನೆಗಳು ಹೆಚ್ಚು ಸಮಾನ ಭವಿಷ್ಯವನ್ನು ರೂಪಿಸುವ ವಾತಾವರಣವನ್ನು ಒಟ್ಟಾಗಿ ನಿರ್ಮಿಸೋಣ ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande