ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ, 08 ಮಾರ್ಚ್ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ
ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ಲೈನ್ ಅರ್ಜಿ ಆಹ್ವಾನ


ಶಿವಮೊಗ್ಗ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಹಾಗೂ ಕೆಲವು ಪಂಚಾಯ್ತಿಗಳನ್ನು ಗ್ರೇಡ್ -2 ರಿಂದ ಗ್ರೇಡ್-1ಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಅಂತಹ ಪಂಚಾಯಿತಿಗಳಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು https://sevasindhuservices.karnataka.gov.in / ರ ಮೂಲಕ ಮಾ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande