ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ, 08 ಮಾರ್ಚ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ
ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ


ಶಿವಮೊಗ್ಗ, 08 ಮಾರ್ಚ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ

ಆಸಕ್ತ ಎಲ್ಲಾ ವರ್ಗದ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ಪ. ಜಾತಿ ಮತ್ತು ಪ. ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣದ ಪ್ರತಿಗಳನ್ನು ಕಛೇರಿಗೆ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂದು ಶಿಕಾರಿಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande