
ಬೆಳಗಾವಿ, 08 ಮಾರ್ಚ್ (ಹಿ.ಸ.):
ಆ್ಯಂಕರ್:
ಬೆಳಗಾವಿ ಜಿಲ್ಲೆಯ ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಸೌಂಡ್ ಸಿಸ್ಟಮ್ ಅಳವಡಿಸಿಕೊಂಡು ಶಬ್ದ ಮಾಲಿನ್ಯ ಉಂಟುಮಾಡುತ್ತಾ ಸಾರ್ವಜನಿಕರಿಗೆ ಹಾಗೂ ರಸ್ತೆ ಸವಾರರಿಗೆ ತೊಂದರೆ ನೀಡುತ್ತಿದ್ದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾ ಪೋಲಿಸ ಮಾಧ್ಯಮ ಪ್ರಕಟಣೆ ನೀಡಿದ್ದು, ಕೆಲವು ವಾಹನ ಚಾಲಕರು ಟ್ರ್ಯಾಕ್ಟರ್‌ಗಳಲ್ಲಿ ಉಚ್ಚ ಶಬ್ದದ ಸೌಂಡ್ ಸಿಸ್ಟಮ್ ಅಳವಡಿಸಿಕೊಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ನೇಸರಗಿ ಪೊಲೀಸ್ ಠಾಣೆಯ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಈ ವೇಳೆ ಟ್ರ್ಯಾಕ್ಟರ್‌ಗಳಲ್ಲಿ ಅಳವಡಿಸಲಾಗಿದ್ದ ಸೌಂಡ್ ಸಿಸ್ಟಮ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಿಯಮ ಉಲ್ಲಂಘಿಸಿದ ವಾಹನ ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa