
ಬೀದರ್, 08 ಮಾರ್ಚ್ (ಹಿ.ಸ.)
ಆ್ಯಂಕರ್:
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೀದರ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾದ 2025–26ನೇ ಸಾಲಿನ ಬೀದರ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,
ಮಹಿಳೆಯರು ಇಂದು ಶಿಕ್ಷಣ, ಉದ್ಯೋಗ, ರಾಜಕೀಯ ಮತ್ತು ಕ್ರೀಡಾ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕ್ರೀಡೆಗಳು ಮಹಿಳೆಯರ ಆರೋಗ್ಯ, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಮಹತ್ವದ ಪಾತ್ರವಹಿಸುತ್ತವೆ ಎಂದರು.
ಇಂತಹ ಕ್ರೀಡಾಕೂಟಗಳು ಜಿಲ್ಲೆಯ ಮಹಿಳೆಯರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿ ಮತ್ತು ಇನ್ನಷ್ಟು ಮಹಿಳೆಯರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ರಾಜ್ಯ ಮತ್ತು ರಾಷ್ಟ್ರಕ್ಕೆ ಕೀರ್ತಿ ತಂದುಕೊಡಲಿ ಎಂದು ಹಾರೈಸಿ, ಎಲ್ಲ ಮಹಿಳೆಯರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa