



ಬಳ್ಳಾರಿ, 09 ಮಾರ್ಚ್ (ಹಿ.ಸ.)
ಆ್ಯಂಕರ್: ಗುರುಕುಲ ವಸತಿ ಶಾಲೆಯ ಮಾನ್ಯತೆಯನ್ನು ರದ್ದು ಮಾಡಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಎಬಿವಿಪಿಯ ಜಿಲ್ಲಾ ಸಂಚಾಲಕ ಕೆ. ದಿಲೀಪ್ ಕುಮಾರ್ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಗುರುಕುಲ ವಸತಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿಯ ಹತ್ಯೆಯಲ್ಲಿ ಮಾದಕಪದಾರ್ಥಗಳ ಪ್ರಭಾವ ಕಾಣುತ್ತಿದೆ. ಆರೋಪಿ ವಿದ್ಯಾರ್ಥಿಯು ಅದ್ಹೇಗೆ ಮಾದಕ ಪದಾರ್ಥವನ್ನು ಪಡೆದನು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಬಳ್ಳಾರಿ ವಿಭಾಗ ಸಂಘಟನಾ ಕಾರ್ಯದರ್ಶಿ ನಾಗರಾಜ ಬಟಗೇರಾ ಅವರು, ಬಳ್ಳಾರಿಯನ್ನು ಡ್ರಗ್ಸ್ ಮುಕ್ತಗೊಳಿಸಬೇಕು. ಇಲ್ಲವಾದಲ್ಲಿ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವಂತೆ ಆಗಲಿದೆ. ಕಾರಣ ಪೊಲೀಸರು ಮತ್ತು ಜಿಲ್ಲಾಡಳಿತ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ. ಭರತ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಲೋಹಿತ್ ರೆಡ್ಡಿ, ಕಾರ್ಯಕರ್ತರಾದ ಕು. ಭವಾನಿ, ರಘು, ಪವನ ಕುಮಾರ, ಶೋಭಾ, ಯಶೋಧಾ, ಸೋಮಶೇಖರ್, ಕಾವೇರಿ ಇನ್ನಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್