ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ
ರಾಯಚೂರು, 09 ಮಾರ್ಚ್ (ಹಿ.ಸ.) ಆ್ಯಂಕರ್ :ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಜನರಿಗೆ ಒದಗಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿರುವ ಗ್ರಾಮ-1 ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿ
ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ


ರಾಯಚೂರು, 09 ಮಾರ್ಚ್ (ಹಿ.ಸ.)

ಆ್ಯಂಕರ್ :ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಜನರಿಗೆ ಒದಗಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿರುವ ಗ್ರಾಮ-1 ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾರ್ವಜನಿಕರು ತಮ್ಮ ಸಮೀಪದಲ್ಲೇ ಸರ್ಕಾರದ ಅನೇಕ ಸೇವೆಗಳನ್ನು ಸುಲಭವಾಗಿ ಪಡೆಯಲು ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ವೆಬ್ಸೈಟ್ ವಿಳಾಸ: https://sevasindhuservices.karnataka.gov.in/directApply.do?serviceld=2631 ಮೂಲಕ ಮಾರ್ಚ್ 15ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande