ಭೀಮ ಗಾಯಕ್ಕೆ ಜಿಲ್ಲಾಡಳಿತದಿಂದ ಚಾಲನೆ
ವಿಜಯಪುರ, 09 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಭೀಮ ಗಾಯನ ಕಾರ್ಯಕ್ರಮ ನಡೆಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅ
ಭೀಮ ಗಾಯಕ್ಕೆ ಜಿಲ್ಲಾಡಳಿತದಿಂದ ಚಾಲನೆ


ವಿಜಯಪುರ, 09 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಭೀಮ ಗಾಯನ ಕಾರ್ಯಕ್ರಮ ನಡೆಸಲಾಯಿತು.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಿತು.

ಸಮಾನತೆಯ ಸ್ವರ ಸಂಭ್ರಮ, ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ. ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮ ಗಾಯನವನ್ನು ಪ್ರಸ್ತುತಪಡಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿರುವ ರಾಜ್ಯದ ಪ್ರಮುಖ ಸ್ಥಳಗಳ ಪೈಕಿ ಆಯ್ದ ಸ್ಥಳಗಳಲ್ಲಿ ಭೀಮಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂಬೇಡ್ಕರ್ ಗೀತೆಗಳ ಕಾರ್ಯಕ್ತಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande