ನಿಂತಿದ್ದ ಬುಲೇರೊ ವಾಹನಕ್ಕೆ ಬೈಕ್ ಡಿಕ್ಕಿ-ಸವಾರ ಸ್ಥಳದಲ್ಲಿ ಸಾವು
ವಿಜಯಪುರ, 09 ಮಾರ್ಚ್ (ಹಿ.ಸ.) ಆ್ಯಂಕರ್ : ಬುಲೆರೋ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದರೂಗಿ ರಸ್ತೆಯಲ್ಲಿ ನಡೆದಿದೆ. ಇಂಡಿ ಪಟ್ಟಣದ ಶಶಿ ಜಿಗಜಿಣಿಗಿ (40) ಮೃತಪಟ್ಟಿರುವ ಬೈಕ್ ಸವಾರ ಎಂದು ಗುರುತಿಸಲಾಗಿದ
ನಿಂತಿದ್ದ ಬುಲೇರೊ ವಾಹನಕ್ಕೆ ಬೈಕ್ ಡಿಕ್ಕಿ-ಸವಾರ ಸ್ಥಳದಲ್ಲಿ ಸಾವು


ವಿಜಯಪುರ, 09 ಮಾರ್ಚ್ (ಹಿ.ಸ.)

ಆ್ಯಂಕರ್ : ಬುಲೆರೋ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದರೂಗಿ ರಸ್ತೆಯಲ್ಲಿ ನಡೆದಿದೆ.

ಇಂಡಿ ಪಟ್ಟಣದ ಶಶಿ ಜಿಗಜಿಣಿಗಿ (40) ಮೃತಪಟ್ಟಿರುವ ಬೈಕ್ ಸವಾರ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲಿ ಮೃತನ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.

ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande