ಮಕ್ಕಳ ಕೋರಿಕೆಗೆ ಮುಖ್ಯಮಂತ್ರಿ ಸ್ಪಂದನೆ
ಬೆಂಗಳೂರು, 09 ಮಾರ್ಚ್ (ಹಿ.ಸ.): ಆ್ಯಂಕರ್: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಮುಖ್ಯಮಂತ್ರಿಗೆ ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ಮಾಡಿದ್ದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಈ ಕುರಿ
Cm


ಬೆಂಗಳೂರು, 09 ಮಾರ್ಚ್ (ಹಿ.ಸ.):

ಆ್ಯಂಕರ್:

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಮುಖ್ಯಮಂತ್ರಿಗೆ ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ಮಾಡಿದ್ದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು,

ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ‌ ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್ ನಲ್ಲಿ ಉಡುತೊರೆಹಳ್ಳ ನೀರಾವರಿ ಯೋಜನೆಯನ್ನು ಘೋಷಿಸಿ, ರೂ.490 ಕೋಟಿ ಅನುದಾನವನ್ನು ಸಹ ಮೀಸಲಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಅಹವಾಲು ಸಲ್ಲಿಸಿದ ಮಕ್ಕಳ ಧ್ವನಿ ಎಳೆಯದಾದರೂ, ಅದನ್ನು ಕಡೆಗಣಿಸದೆ ಮುಕ್ತವಾಗಿ‌ ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ತಾಯಿಯ ಹೃದಯ ನಮ್ಮ ಸರ್ಕಾರದ್ದು. ಪುಟಾಣಿ ಮಕ್ಕಳ‌ ಧನ್ಯವಾದವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ.

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ, ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಮ್ಮ ಕಷ್ಟವನ್ನು ನಮ್ಮ ಗಮನಕ್ಕೆ ತಂದು, ಇಂದು ಸಾವಿರಾರು ಕುಟುಂಬಗಳ ಭವಿಷ್ಯ ಬದಲಾಗಲು ಕಾರಣರಾದ ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande