
ವಿಜಯಪುರ, 09 ಮಾರ್ಚ್ (ಹಿ.ಸ.)
ಆ್ಯಂಕರ್ : ಜಿಲ್ಲಾ ಪಂಚಾಯತಿ, ಕೌಶಲ್ಯಾಭಿವೃದ್ಧಿ ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ-೨೦೨೬ ಕ್ಕೆ ಜಿಲ್ಲಾಧಿಕಾರಿಗಳಾದ ಕೆ. ಆನಂದ ಅವರು ಚಾಲನೆ ನೀಡಿದರು.
ಸ್ವ-ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಹಲವಾರು ವಸ್ತುಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಪ್ರಶಂಸಿಸಿದರು. ಗ್ರಾಮೀಣ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಬೇಕು. ಎಲ್ಲ ಮಹಿಳೆಯರು ಸಬಲೀಕರಣ ಹೊಂದಬೇಕು ಎಂದು ಮಹಿಳೆಯರಿಗೆ ಪ್ರೇರಣೆ ನೀಡಿದರು.
ಮೇಳದಲ್ಲಿ ಜಿಲ್ಲೆಯ ೧೩ ತಾಲೂಕುಗಳ ಸ್ವ-ಸಹಾಯ ಸಂಘಗಳ ಮಹಿಳಾ ಉದ್ಯಮಿದಾರರು ಭಾಗವಹಿಸಿದ್ದರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಎನ್ಆರ್ಎಲ್ಎಂ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯಸುತ್ತಿರುವ ಕೃಷಿ ಸಖಿಯರು ಹಾಗೂ ಪಶು ಸಖಿಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಜಿಲ್ಲಾ ಪಂಚಾಯತಿಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಜಿಲ್ಲೆಯ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಎನ್ ಆರ್ ಎಲ್ಎಂ ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande