ಮಾರ್ಚ ೩೧ರಂದು ಭಗವಾನ್ ಮಹಾವೀರ ಜಯಂತಿ
ಕೊಪ್ಪಳ, 09 ಮಾರ್ಚ್ (ಹಿ.ಸ.) ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 31 ರಂದು ಶ್ರೀ ಭಗವಾನ್ ಮಹಾವೀರ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕನ
ಶ್ರೀ ಭಗವಾನ್ ಮಹಾವೀರ ಜಯಂತಿ ಮಾ. 31


ಶ್ರೀ ಭಗವಾನ್ ಮಹಾವೀರ ಜಯಂತಿ ಮಾ. 31


ಕೊಪ್ಪಳ, 09 ಮಾರ್ಚ್ (ಹಿ.ಸ.)

ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 31 ರಂದು ಶ್ರೀ ಭಗವಾನ್ ಮಹಾವೀರ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಹೇಳಿದರು.

ಅವರು ಸೋಮವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್-2 ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಶ್ರೀ ಭಗವಾನ್ ಮಹಾವೀರ ಜಯಂತಿ ಪ್ರಯುಕ್ತ ಸಮಾಜದ ಸಹಭಾಗಿತ್ವದಲ್ಲಿ ಮಾ. 31ರ ಬೆಳಿಗ್ಗೆ 8.30ಕ್ಕೆ ಮಹಾವೀರರ ಭಾವಚಿತ್ರದ ಮೆರವಣಿಗೆಯು ನಗರದ ಸಾಹಿತ್ಯ ಭವನದದಿಂದ ಆರಂಭಗೊಂಡು ಶ್ರೀ ಮುನಿ ಸೂರತ್ ಜೈನ ಮಂದಿರದವರಿಗೆ ನಡೆಯಲಿದೆ. ನಂತರ ಬೆಳಿಗ್ಗೆ 11.30ಕ್ಕೆ ನಗರದ ಎಂಪಿ ಪ್ಯಾಲೇಸ್ ನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪೂಜೆ, ಶ್ರೀ ಭಗವಾನ್ ಮಹಾವೀರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಶ್ರೀ ಭಗವಾನ್ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತದೆ. ಈ ಜಯಂತಿ ಕಾರ್ಯಕ್ರಮ ಯಶಸ್ವಿಗೆ ಸಮಾಜದ ಎಲ್ಲಾ ಮುಖಂಡರು, ಸಾರ್ವಜನಿಕರ ಸಹಕಾರವು ಅತ್ಯವಶ್ಯಕವಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಮಾಜದ ಮುಖಂಡರಾದ ಮಹೇಂದ್ರ ಚೋಪ್ರಾ ಹಾಗೂ ಮತ್ತಿತರರು ಸೇರಿದಂತೆ ವಿವಿಧ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande